For the best experience use Mini app app on your smartphone
ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ 17 ಮಂದಿ ವಿರುದ್ಧ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ದೂರು ನೀಡಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿದ್ದು, ಈ ತನಿಖೆಯ ವರದಿಯ ಮೇರೆಗೆ 17 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಸ್.ಗೋಪಿನಾಥ್ ದೂರು ನೀಡಿದ್ದು, ಎಫ್‌ಐಆ‌ರ್ ದಾಖಲಾಗಿದೆ.
short by Koushik KS / 07:57 am on 03 May
ಸಂಸದ ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ಜೀವನ ಹಾಗೂ ಸಂದೇಶಗಳು ನಮ್ಮೆಲ್ಲರಿಗೂ ಪ್ರೇರಣೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿದರು. ನಂಜನಗೂಡು ನಗರದಲ್ಲಿ ಗುರುವಾರ ಬಿಜೆಪಿಯಿಂದ ಆಯೋಜಿಸಿದ್ದ ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಂಜನಗೂಡನ್ನು ಸ್ಯಾಟಲೈಟ್ ಸಿಟಿಯನ್ನಾಗಿ ಮಾಡುವ ಕನಸನ್ನು ಶ್ರೀನಿವಾಸ್ ಪ್ರಸಾದ್ ಕಂಡಿದ್ದರು. ನಾವೆಲ್ಲರೂ ಅವರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡೋಣ” ಎಂದರು.
short by Prashant badiger / 07:12 pm on 02 May
ಹುಣಸೂರು ತಾಲ್ಲೂಕು ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಉರುಳು ಹಾಕಿ ಜಿಂಕೆಯನ್ನು ಹಿಡಿದು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ. ಕೊಳವೆ ಹಾಡಿಯ ಗಣೇಶ್, ಬಿಲ್ಲೇನಹೊಸಳ್ಳಿ ಹಾಡಿಯ ರಾಮ ಬಂಧಿತರು. ಆರೋಪಿಗಳಿಂದ 40 ಕೆ.ಜಿ ಜಿಂಕೆಯ ಮಾಂಸ, ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದ ಗಣೇಶ್, ವಿಶ್ವ, ಕುಮಾರ್ ಪತ್ತೆಗೆ ಶೋಧ ಕಾರ್ಯ ನಡೆದಿದೆ.
short by Prashant badiger / 07:46 pm on 02 May
ಮುಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಜ್ಞಾನಕ್ಕೆ ಪ್ರಧಾನ್ಯತೆ ಹೆಚ್ಚಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಹೇಳಿದರು. ಮೈಸೂರಿನ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ದತ್ತಿ ಕಾರ್ಯಕ್ರಮ ಉದ್ಘಾಟಿಸಿದ ಅವರು, “ಒಬ್ಬ ವ್ಯಕ್ತಿಯನ್ನು ಗುರುತಿಸುವುದು ಶಿಕ್ಷಣದಿಂದಲೇ ಹೊರತು ಅವನ ಬಳಿ ಇರುವ ಸಂಪತ್ತಿನಿಂದ ಅಲ್ಲ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಆಸಕ್ತಿ ತೋರಿ ಏನನ್ನಾದರೂ ಸಾಧಿಸಬೇಕು” ಎಂದರು.
short by Prashant badiger / 09:34 pm on 02 May
ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಗ್ರಾಮದಲ್ಲಿ ದೊಡ್ಡಮ್ಮತಾಯಿ ಜಾತ್ರೆ ಹಿನ್ನೆಲೆಯಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಇದಕ್ಕೂ ಮುನ್ನ ಚುಂಚನಕಟ್ಟೆ ಕಾವೇರಿ ನದಿ ದಡದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಗಿದ ತಾಯಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಭಕ್ತರು ಪೂಜೆ ಸಲ್ಲಿಸಿದರು. ಜಾತ್ರೆಯಲ್ಲಿ ಭಾಗಿಯಾದ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
short by Prashant badiger / 06:57 pm on 02 May
ಕನ್ನಡ ಖಾಸಗಿ ರಿಯಾಲಿಟಿ ಶೋವೊಂದರಲ್ಲಿ ಮೆಕ್ಯಾನಿಕ್ ವೃತ್ತಿಗೆ ಅವಮಾನಿಸಲಾಗಿದೆ ಎಂದು ಆರೋಪಿಸಿ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ ಗುರುವಾರ ದೂರು ದಾಖಲಿಸಿದೆ. ಈ ವೇಳೆ ಮಾತನಾಡಿದ ಸಂಘದ ಖಜಾಂಚಿ ಎಂ.ರಾವ್, “ಮೆಕ್ಯಾನಿಕ್‌ಗಳನ್ನು ಮದುವೆಯಾದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ ಎಂದು ನಿಂದಿಸಲಾಗಿದೆ. ಶ್ರಮಿಕ ವರ್ಗವನ್ನು ಕೀಳಾಗಿ ಬಿಂಬಿಸಿ ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಅವರು ಹೇಳಿದರು.
short by Prashant badiger / 09:56 pm on 02 May
Covaxin ಅನ್ನು ಮೊದಲ ಸುರಕ್ಷತೆಯ ಮೇಲೆ ಅಭಿವೃದ್ಧಿ ಪಡಿಸಲಾಗಿದೆ ಮತ್ತು ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಅದರ ತಯಾರಕ ಭಾರತ್ ಬಯೋಟೆಕ್ ಗುರುವಾರ ಹೇಳಿದೆ. ಕೋವಿಶೀಲ್ಡ್ ತಯಾರಕ ಅಸ್ಟ್ರಾಜೆನೆಕಾ ತನ್ನ COVID-19 ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮ ಉಂಟುಮಾಡಬಹುದು ಎಂದು ಒಪ್ಪಿಕೊಂಡ ನಂತರ ಈ ಹೇಳಿಕೆ ಬಂದಿದೆ. Covaxin ಸುರಕ್ಷತೆಯನ್ನು ಆರೋಗ್ಯ ಸಚಿವಾಲಯವು ಮೌಲ್ಯಮಾಪನ ಮಾಡಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.
short by Prashant badiger / 10:47 pm on 02 May
“ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಶಾಸಕ ಹೆಚ್‌.ಡಿ.ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರು ಧೈರ್ಯದಿಂದ ಧ್ವನಿ ಎತ್ತಬೇಕು” ಮೈಸೂರಿನಲ್ಲಿ ಎಂದು ಕರ್ನಾಟಕ ದಲಿತ ಚಳವಳಿ ನವನಿರ್ಮಾಣ ವೇದಿಕೆ ಮುಖಂಡ ಹರಿಹರ ಆನಂದಸ್ವಾಮಿ ಹೇಳಿದರು. “'ಈ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಸಹಾಯಕತೆಯನ್ನು ಬಳಸಿಕೊಂಡು ಅಕ್ಷಮ್ಯ ಅಪರಾಧ ಎಸಗಲಾಗಿದೆ. ವಯಸ್ಸು, ಸಂಬಂಧ ಅರಿಯದೆ ವಿಕೃತವಾಗಿ ವರ್ತಿಸಲಾಗಿದೆ” ಎಂದು ಅವರು ಹೇಳಿದರು.
short by Koushik KS / 07:41 am on 03 May
ಸರಗೂರು ತಾಲ್ಲೂಕಿನ ಆಗತ್ತೂರು ಗ್ರಾಮದಲ್ಲಿ ಗುರುವಾರ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯ ಹಾಗೂ ವಿವಿಧ ಕಾಲ ತಂಡಗಳೊಂದಿಗೆ ಅಂಬೇಡ್ಕರ್ ಪುತ್ಥಳಿಯನ್ನು ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಶಾಂತರಾಜ್, ಅಂಬೇಡ್ಕರ್ ಅಸ್ಪೃಶ್ಯರಿಗಾಗಿ ಮತ್ತು ಅವರ ಸಾಮಾಜಿಕ, ಆರ್ಥಿಕ ಪ್ರಗತಿಗಾಗಿ ನಿರಂತರ ಹೋರಾಟ ಮಾಡಿದ್ದರು ಎಂದರು.
short by Prashant badiger / 07:24 pm on 02 May
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಸಂಸ್ಕಾರ ಕಲಿಯಬೇಕು ಎಂದು ಹೆಚ್.ಡಿ.ಕೋಟೆಯ ವಿಶ್ವಭಾರತಿ ಕಾಲೇಜು ಪ್ರಾಂಶುಪಾಲ ರಮಾನಂದ್ ಹೇಳಿದರು. ತಾಲ್ಲೂಕಿನಲ್ಲಿಯೇ ಪ್ರಥಮ ಬಾರಿಗೆ ವಿಶ್ವಭಾರತಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ನಡೆದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಶೈಕ್ಷಣಿಕ ವಿಚಾರಗಳಿರಲಿ ವಿದ್ಯಾರ್ಥಿಗಳಿಗೆ ನಾವು ಸಲಹೆ ನೀಡುತ್ತೇವೆ ಎಂದರು. ಇದೇ ವೇಳೆ ಅರ್ಚಕರಾದ ರಘು ಕೀರ್ತಿ, ಮಕ್ಕಳಿಗೆ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ತಿಳಿಸಿದರು.
short by Prashant badiger / 08:08 pm on 02 May
ಕೆ.ಆರ್.ನಗರ ತಾಲ್ಲೂಕಿನ ಗಂಧನಹಳ್ಳಿಯಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯುವ ಗ್ರಾಮ ದೇವತೆ ಹುಣಸಮ್ಮತಾಯಿ ಜಾತ್ರೆಗೆ ಬರದ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ದೇವಸ್ಥಾನಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಮೂಲಕ ತಿಳಿಸಿದೆ.
short by Prashant badiger / 08:56 pm on 02 May
ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಆಂಬುಲೆನ್ಸ್ ವಾಹನವೊಂದು ಸುಟ್ಟು ಭಸ್ಮವಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಬ್ಬಾಳು ರಿಂಗ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಇಡೀ ವಾಹನಕ್ಕೆ ಬೆಂಕಿ ಆವರಿಸಿ ಸುಟ್ಟು ಹೋಗಿದೆ.‌ ಈ ಬಗ್ಗೆ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
short by Prashant badiger / 10:37 pm on 02 May
ಕೃಷ್ಣರಾಜ ನಗರದಲ್ಲಿ ಮಹಿಳೆ ನಾಪತ್ತೆಯಾದ ಬಗ್ಗೆ ಶಾಸಕ ಹೆಚ್.​ಡಿ ರೇವಣ್ಣ ವಿರುದ್ಧ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಈ ಬೆಳವಣಿಗೆ ನಡೆದಿದೆ. “ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋ ಬಹಿರಂಗವಾದ ಬಳಿಕ ತಾಯಿ ನಾಪತ್ತೆಯಾಗಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆ.ಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
short by Koushik KS / 08:36 am on 03 May
ಪ್ರೀತಿಸಿದ ಯುವತಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಯುವತಿಯ ಸಂಬಂಧಿಕರು ಯುವಕನ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದ್ದು, 4 ದಿನಗಳ ಬಳಿಕ ವರದಿಯಾಗಿದೆ. ಯುವತಿಯ ಸಂಬಂಧಿಕರಾದ ಚಂದ್ರಪ್ಪ, ಬಸಪ್ಪ ಹಾಗೂ ಗುತ್ತೆವ್ವ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕೆಲವು ತಿಂಗಳ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು.
short by Koushik KS / 10:14 am on 03 May
ನಂಜನಗೂಡಿನ ಕೊಣನೂರು ಗ್ರಾಮದ ವಿಶೇಷ ಚೇತನ ರಾಜಶೇಖರ್‌ ಅವರ ಪಿಂಚಣಿ ಸ್ಥಗಿತಗೊಂಡ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಅವರನ್ನು ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಸಿದ್ಧಾರ್ಥ, ಪಿಡಿಒ ಶ್ರೀನಿವಾಸ್ ಭೇಟಿ ಮಾಡಿದ್ದಾರೆ. “ರಾಜಶೇಖರ್ ಬ್ಯಾಂಕ್ ಖಾತೆ ಪರಿಶೀಲಿಸಿ ಪಿಂಚಣಿ ಸ್ಥಗಿತಗೊಂಡ ಬಗ್ಗೆ ಸಂಬಂಧಿತ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಲೋಪದೋಷಗಳನ್ನು ಸರಿಪಡಿಸಿ 2-3 ದಿನಗಳಲ್ಲಿ ಪಿಂಚಣಿ ಹಣ ಜಮೆ ಮಾಡಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
short by Prashant badiger / 05:51 pm on 02 May
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಮೈಸೂರು ಜಿಲ್ಲೆಯ 26 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ 113 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಲಿವೆ. "ಜಿಲ್ಲೆಯಾದ್ಯಂತ ಇರುವ ಕೆರೆಗಳ ಹೂಳೆತ್ತುವ ಕೆಲಸ ಆಗಬೇಕು. ಕುಡಿಯುವ ನೀರಿಗೆ ಅನುದಾನದ ಕೊರತೆ ಇಲ್ಲ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.
short by Koushik KS / 09:39 am on 03 May
ರಸಾಯನಶಾಸ್ತ್ರ ವಿಭಾಗದಲ್ಲಿ ಸಂಶೋಧನೆ, ಹೊಸ ಆವಿಷ್ಕಾರಕ್ಕೆ ಸಂಬಂಧಿಸಿದಂತೆ ರಸಾಯನಶಾಸ್ತ್ರಜ್ಞ ಹಾಗೂ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನಿಗಳ ಸಾಲಿನಲ್ಲಿ ಸ್ಥಾನ ದೊರೆತಿದೆ. ವಿಶ್ವಮಟ್ಟದಲ್ಲಿ 10,575ನೇ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ 146ನೇ ಸ್ಥಾನವನ್ನು ರಂಗಪ್ಪ ಪಡೆದಿದ್ದಾರೆ. Research.com‌ನ 3ನೇ ಆವೃತ್ತಿಯಲ್ಲಿ ಉತ್ತಮ ಸಂಸಶೋಧಕರ ಶ್ರೇಯಾಂಕ ಆಧಾರದ ಮೇಲೆ ಈ ಪಟ್ಟಿ ಪ್ರಕಟಿಸಲಾಗಿದೆ.
short by Prashant badiger / 11:06 pm on 02 May
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸುವ ಕುರಿತು ನಮ್ಮಿಂದ ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ನೀಡಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಚಿತ್ರೀಕರಿಸಿದ ಆರೋಪ ಪ್ರಜ್ವಲ್ ಮೇಲಿದೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
short by Koushik KS / 05:42 pm on 02 May
ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ಪ್ರಕರಣವು ತೀವ್ರ ಮುಖಭಂಗ ತಂದಿದೆ ಎಂದು ವಿಜಯಪುರದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. “ಈ ವಿಷಯ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ಆದರೆ, ಬಿಜೆಪಿ ಆರೋಪಿಯನ್ನು ಬೆಂಬಲಿಸುವುದಿಲ್ಲ ಅಥವಾ ಅವರ ಜೊತೆ ನಿಲ್ಲುವುದಿಲ್ಲ. ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಆಗ್ರಹಿಸುತ್ತೇವೆ” ಎಂದು ಹೇಳಿದರು.
short by Koushik KS / 07:15 am on 03 May
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕೈಬಿಟ್ಟಿದೆ. ಏತನ್ಮಧ್ಯೆ, ಪಕ್ಷವು ಅವರ ಮಗ ಕರಣ್ ಭೂಷಣ್ ಸಿಂಗ್‌ಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ. ರಾಯ್ ಬರೇಲಿಯಿಂದ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
short by Prashant badiger / 05:32 pm on 02 May
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಜೆಡಿಎಸ್​ ಶಾಸಕ ಹೆಚ್.​ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಮಂಗಳವಾರ ರೇವಣ್ಣ ಹಾಗೂ ಪುತ್ರ ಪ್ರಜ್ವಲ್‌ಗೆ ನೋಟಿಸ್ ನೀಡಿತ್ತು. ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆದ ಬಳಿಕ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿದೆ.
short by Koushik KS / 05:51 pm on 02 May
ಪ್ರಧಾನಿ ನರೇಂದ್ರ ಮೋದಿ ಸಾವಿನ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ಖಂಡಿಸಿ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಗುರುವಾರ ಬಿಜೆಪಿ ನಗರ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ನಗರಾಧ್ಯಕ್ಷೆ ರೇಣುಕಾ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ಮೋದಿಯವರ ಸಾವನ್ನು ಬಯಸಿರುವುದು ಖಂಡನೀಯ ಎಂದರು. “ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ?" ಎಂದು ರಾಜು ಕಾಗೆ ಹೇಳಿಕೆ ನೀಡಿದ್ದರು.
short by Prashant badiger / 11:32 pm on 02 May
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ವಕ್ತಾರ ಎಸ್.ರಾಜೇಶ್, “ಉದ್ಯೋಗ, ವರ್ಗಾವಣೆ ಕೋರಿ ಬಂದ ಅಸಹಾಯಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅಕ್ಷ್ಯಮ್ಯ” ಎಂದಿದ್ದಾರೆ. “ನೂರಾರು ಮಹಿಳೆಯರ ಮೇಲೆ ದೌರ್ಜನ್ಯವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಬೇಸರ ತಂದಿದೆ” ಎಂದು ಅವರು ಹೇಳಿದರು.
short by Prashant badiger / 08:36 pm on 02 May
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ಆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗಾಂಧಿಯವರ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರು ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಎರಡು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ.
short by Koushik KS / 08:20 am on 03 May
"ಭಾರತ ಮತ್ತು ಕೆನಡಾ ಹೊಂದಾಣಿಕೆ ಮಾಡಿಕೊಳ್ಳಬೇಕು ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದ ಉಂಟಾದ ಸಮಸ್ಯೆಯನ್ನು ನಿರ್ಲಕ್ಷಿಸಲಾಗುವುದಿಲ್ಲ" ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆಯನ್ನು ಭಾರತ ಖಂಡಿಸಿದೆ. ಈ ಹೇಳಿಕೆಗಳು ಕೆನಡಾದಲ್ಲಿ ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ಯಾವ ರೀತಿ ರಾಜಕೀಯ ಅವಕಾಶ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ವಿವರಿಸುತ್ತದೆ ಎಂದು ಎಂಇಎ ಹೇಳಿದೆ.
short by Prashant badiger / 10:17 pm on 02 May
Load More
For the best experience use inshorts app on your smartphone